Belagavi

ಪ್ರಭಾಕರ್ ಕೋರೆ ಜೊತೆ ರಾಜನಾಥ್‍ಸಿಂಗ್ ಭೇಟಿಯಾದ ರಮೇಶ ಜಾರಕಿಹೊಳಿ

Share

ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕೆಎಲ್‍ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಅವರ ಜೊತೆಗೆ ಭೇಟಿ ಮಾಡಿ ಚರ್ಚೆ ನಡೆಸಿದರು.

ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ‌, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಗಂಡು ಮಕ್ಕಳಿಗೆ ಬೆಳಗಾವಿ ಭಾಗದಲ್ಲಿ ಆದ್ಯತೆಯ ಮೇರೆಗೆ ಸೈನಿಕ ಶಾಲೆ ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ‌ ಮಾಡಿದರು. ಈ ಕುರಿತು ಸನ್ಮಾನ್ಯ ಪ್ರಧಾನಮಂತ್ರಿಗಳಿಗೂ ಪತ್ರ ಬರೆದು ಮನವಿ ಸಲ್ಲಿಸಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

Tags:

error: Content is protected !!