Events

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದಕ್ಕೆ

Share

ಹಾವೇರಿಯಲ್ಲಿ ಫೆಬ್ರವರಿ 26ರಿಂದ 28ವರೆಗೆ ನಡೆಸಲು ಉದ್ದೇಶಿಸಲಾಗಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಚರ್ಚಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ. ಕೊರೋನಾ ನಿಯಮಗಳ ಪಾಲನೆ ಕಷ್ಟಕರವಾಗಿರುವ ಕಾರಣಕ್ಕೆ ಸಮ್ಮೇಳನ ಮುಂದೂಡಲು ತೀರ್ಮಾನಿಸಲಾಗಿದೆ ಎಂದು ಸಭೆಯ ನಂತರ ಸಚಿವ ಅರವಿಂದ ಲಿಂಬಾವಳಿ ಮಾಹಿತಿ ನೀಡಿದ್ದಾರೆ. ಕೋವಿಡ್ ಹೊಸ ಮಾರ್ಗಸೂಚಿ ಫೆಬ್ರವರಿ ಕೊನೆಗೆ ಪ್ರಕಟವಾಗಲಿದೆ. ಮಾರ್ಚ್ 9ರಂದು ಮತ್ತೊಂದು ಸಭೆ ನಡೆಸಿ ಸಮ್ಮೇಳನ ದಿನ ನಿಗದಿಪಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

Tags:

error: Content is protected !!