ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಸಂಕಲ್ಪ ಎಂಬ ಘೋಷವಾಕ್ಯದೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಹೋರಾಟದ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ಸೇವಾ ಸಮಿತಿಯ ವಿವಿಧ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಪದಗ್ರಹಣ ಸ್ವೀಕರಿಸಿದರು.
ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಸಂಕಲ್ಪ ಮಾಡಿದ ಪದಾಧಿಕಾರಿಗಳು ಹೋರಾಟಗಳ ಮೂಲಕ ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವದು ಸೇರಿದಂತೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸಂಕಲ್ಪ ತೊಟ್ಟರು. ಇದೆ ಸಂದರ್ಭದಲ್ಲಿ ವಿವಿಧ ಪದಾಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೈಗೈದ ಸಾಧಕರಿಗೆ ಸನ್ಮಾನಿಸಲಾಯಿತು. ಇನ್ನೂ ಇದೆ ಸಂದರ್ಭದಲ್ಲಿ ಇವೆಂಟ್ ಇಟ್ ಎನ್ನೊ ವೆಬ್ಸೈಟ್ ಉದ್ಘಾಟಿಸಿ ಲೋಕಾರ್ಪಣೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಸೇವಾ ಸಮಿತಿಯ ರಾಜ್ಯ ಅಧ್ಯಕ್ಷ ಮಹಾದೇವ ಬಿರಾದಾರ, ರಾಜ್ಯ ಗೌರವಾಧ್ಯಕ್ಷ ಗಜಾನಂದ ಸುತಾರ, ಉಪಾಧ್ಯಕ್ಷ ಯಶವಂತ ತಡ್ವಲ್, ರಾಜ್ಯ ಬಿಜೆಪಿ ಯುವ ಮೊರ್ಚಾದ ರಾಜಕುಮಾರ ಸಗಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು…