ನೂತನ ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಅಧಿಕಾರ ಸ್ವೀಕರಿಸಿದರು.

ಹೌದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿದ್ದ ಡಾ.ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಿ ನೂತನ ಪೊಲೀಸ್ ಆಯುಕ್ತರಾಗಿ ಡಾ.ಎಂ.ಬಿ.ಬೋರಲಿಂಗಯ್ಯ ಅವರನ್ನು ನೇಮಕ ಮಾಡಿ ನಿನ್ನೆ ಶುಕ್ರವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಶನಿವಾರ ಮಧ್ಯಾಹ್ನ ನೂತನ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಅವರಿಗೆ ಡಾ.ಕೆ.ತ್ಯಾಗರಾಜನ್ ಅವರು ಅಧಿಕಾರ ಹಸ್ತಾಂತರಿಸಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದ ವೇಳೆ ನಾಡದ್ರೋಹಿ ಎಂಇಎಸ್ ಪುಂಡರ ಪುಂಡಾಟಿಕೆ ಘಟನೆಗೆ ಸಂಬಂಧಿಸಿದಂತೆ ಘಟನೆಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಗಂಭೀರ ಆರೋಪ ಮಾಡಿದ್ದರು. ಹೀಗಾಗಿಯೇ ಡಾ.ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ. ನೂತನ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಈ ಹಿಂದೆ ಉಡುಪಿ ಜಿಲ್ಲೆಯ ಪೆÇಲೀಸ್ ವರಿμÁ್ಠಧಿಕಾರಿ ಹುದ್ದೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಯ ಉನ್ನತ ಹುದ್ದೆ ಅಲಂಕರಿಸಿ ದಕ್ಷ ಅಧಿಕಾರಿ ಎಂದು ಗುರುತಿಸಿಕೊಂಡಿದ್ದಾರೆ. ಅದೇ ರೀತಿ ಬೆಳಗಾವಿಯಿಂದ ವರ್ಗಾವಣೆಗೊಂಡಿರುವ ಡಾ.ಕೆ. ತ್ಯಾಗರಾಜನ್ ಅವರನ್ನು ಬೆಂಗಳೂರಿನ ಡೆಪ್ಯುಟಿ ಇನ್‍ಸ್ಪೆಕ್ಟರ್ ಜನರಲ್ ಆಫ್ ಪೆÇಲೀಸ್ ಹುದ್ದೆಗೆ ನೇಮಕ ಮಾಡಲಾಗಿದೆ.