ದೇಶದಲ್ಲಿ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದ ಚರ್ಚ ಪಾದ್ರಿಗಳ ಮೇಲೆ ಕೆಲ ಮತೀಯ ದುಷ್ಕರ್ಮಿಗಳು ದಾಳಿ ಮಾಡಿ ದ್ವೇಶದ ಭಾಷಣ ಮಾಡುವ ಮೂಲಕ ರಾಷ್ಟ್ರದ ಏಕತೆ ಧಕ್ಕೆ ತರುತ್ತಿದ್ದಾರೆಂದು ಆರೋಪಿಸಿ ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚರ್ಚ ಪಾದ್ರಿಗಳ ಮೇಲೆ ಕೆಲ ಮತೀಯ ದುಷ್ಕರ್ಮಿಗಳು ದಾಳಿ ಮಾಡಿ ದ್ವೇಶದ ಭಾಷಣ ಮಾಡುವ ಮೂಲಕ ಧರ್ಮ,ಧರ್ಮಗಳ ಮಧ್ಯೆ ದ್ವೇಷ ಬರುವಂತೆ ಮಾಡುತ್ತಿರುವುದನ್ನು ಖಂಡಿಸಿ ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಘಟಕದ ಕಾರ್ಯಕರ್ತರು ಸೋಮವಾರ ನಗರದ ಆರ್ ಟಿಒ ಬಳಿ ಇರುವ ಕಾಂಗ್ರೆಸ್ ಭವನದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು.
ಈ ವೇಳೆ ಮಾತನಾಡಿದ ನ್ಯಾಯವಾದಿಗಳಾದ ರಿಚ್ಮಂಡ್ ರಿಕ್ಕಿ, ರಾಜ್ಯದಲ್ಲಿ ಕ್ರೈಸ್ತರ ಮೇಲೆ ಹಲ್ಲೆಗಳು ನಡೆಯುತ್ತಿರುವುದನ್ನು ನಾವು ಖಂಡಿಸುತ್ತೇವೆ. ಇನ್ನು ಸರಕಾರ ಕ್ರೈಸ್ತರನ್ನು ಹತ್ತಿಕ್ಕುವ ಉದ್ದೇಶದಿಂದಲೇ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇನ್ನು ನಾವು ರಾಜ್ಯ ಸರಕಾರ ಈ ಕೂಡಲೇ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಬಾರದೆಂದು ಒತ್ತಾಯಿಸಿದರು.
ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ರವಿ ಮೂಡಲಗಿ, ಹಾಜಿ ಮುಸಾ ಘೋರಿಖಾನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.