ಬೆಳಗಾವಿಯಲ್ಲಿ ಕನ್ನಡ ಮರಾಠಿಗರು ಅನ್ನೋದಕ್ಕಿಂತ ಎಲ್ಲರೂ ಭಾರತೀಯರು. ಎಲ್ಲಾ ರೀತಿಯ ಜನರಿದ್ದು ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುತ್ತೇವೆ. ಕಾನೂನು ಕೈಗೆತ್ತಿಕೊಂಡ್ರೇ ಕಾನೂನಿನಲ್ಲಿ ಇರುವ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದು ನೂತನ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಭರವಸೆ ನೀಡಿದ್ದಾರೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಸರ್ಕಾರದ ಆದೇಶದಂತೆ ಪೆÇಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಈ ಹಿಂದೆ ಇದ್ದ ಅಧಿಕಾರಿಗಳು ಮಾಡಿದ ಉತ್ತಮ ಕೆಲಸಗಳನ್ನ ಮುಂದುವರೆಸುತ್ತೇನೆ. ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಕ್ರೈಂ ಪ್ರಕರಣಗಳನ್ನ ಪರಿಶೀಲನೆ ಮಾಡಿ ಹೆಚ್ಚಿನ ರೀತಿಯಲ್ಲಿ ಕಂಟ್ರೋಲ್ ಮಾಡುತ್ತೇವೆ. ನೂತನ ಕಮಿಷನರ್, ಅಧಿಕಾರಿಗಳು ಮತ್ತು ನಾಗರಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಇನ್ನು ಅಧಿವೇಶನದ ವೇಳೆ ಎಂಇಎಸ್ ಪುಂಡಾಟಿಕೆ ಪ್ರಕರಣ ಸಂಬಂಧ ಆ ಕೇಸ್‍ಗೆ ಸಂಬಂಧಿಸಿದಂತೆ ಡಿಟೈಲ್ ತೆಗೆದುಕೊಂಡು ನೋಡಿಕೊಳ್ಳುತ್ತೇನೆ. ಕೇಸ್ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರೆಯುತ್ತೇವೆ ಎಂದು ಬೋರಲಿಂಗಯ್ಯ ತಿಳಿಸಿದರು.