ಮಾಜಿ ಸಚಿವ ಎಂಬಿ ಪಾಟೀಲ್ ವಿರುದ್ದ ಗೋವಿಂದ ಕಾರಜೋಳ ಬೆಂಬಲಿಗರು ವಿಜಯಪುರದಲ್ಲಿರುವ ಎಂಬಿ ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರದ ನಗರ ಸೋಲಾಪುರ ರಸ್ತೆಯಲ್ಲಿರುವ ಎಂಬಿ ಪಾಟೀಲ್ ನಿವಾಸಕ್ಕೆ ಸಚಿವ ಗೋವಿಂದ ಕಾರಜೋಳ ವಿರುದ್ಧ ಎಂಬಿ ಪಾಟೀಲ್ ಅಸಂಭದ್ದ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದರು. ಎಂಬಿ ಪಾಟೀಲ್ ಮನೆಗೆ ಮುತ್ತಿಗೆ ಹಾಕದಂತೆ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಎಂ ಬಿ ಪಾಟೀಲ್ ಮನೆ ಮುಂದೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿತ್ತು. ಇದ್ಯಾಗೂ ಪ್ರತಿಭಟನಾಕಾರರು ಎಂಬಿ ಪಾಟೀಲ್ ಮನೆಗೆ ನುಗ್ಗಲು ಯತ್ನಿಸಿದಾಗ ತಡೆದ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.