ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿಯಲ್ಲಿ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು.

ಇಂದು ಮಂಗಳವಾರ ಕಲಬುರ್ಗಿಯಲ್ಲಿ ನಡೆದ 36ನೇ ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರತಿದಿನ ರಾಜಕಾರಿಣಿಗಳು ಪತ್ರಿಕೆಗಳನ್ನು ಓದದೇ ಇರಲು ಆಗುವುದಿಲ್ಲ. ಹಾಗಾಗಿ ಪ್ರತೀ ದಿನ ರಾಜಕಾರಣಿಗಳು ದಿನಪತ್ರಕೆಗಳನ್ನು ಓದುತ್ತೇವೆ.
ಅಲ್ಲದೇ ಅದರಲ್ಲಿ ತಮ್ಮ ಬಗ್ಗೆ ಏನು ಬಂದಿದೆ ಇನ್ನು ಬೇರೆಯವರ ಬಗ್ಗೆ ಏನು ಬರೆದಿದ್ದಾರೆ ಎಂದು ತಿಳಿಯದೇ ಹೋದರೆ ಜನತನ್ನು ತಲುಪಸು ರಾಜಕಾರಣಿಗಳಿಗೆ ಸಾಧ್ಯವಾಗುವುದಿಲ್ಲ. ಹಾಗಾಗಿ ಎರಡರ ನಡುವೆಯೂ ಅವಿನಾಭಾವ ಸಂಬಂಧವಿದೆ. ಹಾಗಾಗಿ ಪತ್ರಕರ್ತರು ಹಾಗೂ ರಾಜಕಾರಣಿಗಳು ಒಗ್ಗಟ್ಟಾಗಿದ್ದು ಒಳ್ಳೆಯ ಕಾರ್ಯಗಳನ್ನು ಮಾಡೋಣ ಎಂದರು.
ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸಂಸದ ಉಮೇಶ್ ಜಾಧವ್, ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕಲಾವಿದೆ ತಾರಾ ಅನೂರಾಧ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕಲಬುರಗಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.