ಬೆಳಗಾವಿ ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ಲಕ್ಷಾಂತರ ರೂಪಾಯಿ ಆಭರಣ ಸೇರಿಂದತೆ, ಕಾಣಿಕೆ ಪೆಟ್ಟಿಗೆ ಹೊತ್ತೊಯ್ದಿದ್ದಾರೆ.

ಬೆಳಗಾವಿ ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ಸವಣ್ಣ ದೇವರ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು, ಸುಮಾರು 2.5ಕಲ್ಷ ಮೌಲ್ಯದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಎಗರಿಸಿದ್ದಾರೆ. ಇದರೊಂದಿಗೆ ದೇವಸ್ಥಾನದಲ್ಲಿದ್ದ ಕಾಣಿಕೆ ಪೆಟ್ಟಿಗೆಯನ್ನೂ ಸಹ ಹೊತ್ತೊಯ್ದಿದ್ದಾರೆ.
ಈ ವೇಳೆ ಮಾತನಾಡಿದ ಗ್ರಾಮಸ್ಥರು, ನಿನ್ನೆ ತಡರಾತ್ರಿ ಕಳ್ಳರು ಬಸವಣ್ಣ, ಲಕ್ಷ್ಮಿ ಹಾಗೂ ಸರಸ್ವತಿ ಮಂದಿರಗಳಲ್ಲಿ ಕಳ್ಳತನ ಮಡಿದ್ದಾರೆ ದೇವರ ಮೂರ್ತಿ ಕಾಣಿಕೆ ಪೆಟ್ಟಿಗೆ ಸೇರಿದಂತೆ ಸುಮಾರು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎಂದರು..
ಇನ್ನು ಈ ಕುರಿತಂತೆ ಸ್ಥಳಕ್ಕೆ ಭೇಟಿ ನೀಡಿದ ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.