ಕಾಂಗ್ರೆಸ್ ಪಾದಯಾತ್ರೆ ಇದು ಗಿಮಿಕ್ ಪಾದಯಾತ್ರೆ. ಜನರ ಬಗ್ಗೆ ಅವರಿಗೆ ಕಿಂಚಿತ್ ಕಾಳಜಿ ಇಲ್ಲ. ಮೇಕೆದಾಟು ಬಗ್ಗೆ ಈಗ ಮೈ ಪರಚಿಕೊಳ್ತಿದ್ದಾರೆ. ನನಗೆ ಮಸಾಲೆ ಬೇಕಿಲ್ಲ, ಅವರಿಗೆ ಬೇಕಿರೋದು. ಇವರಿಗೆ ನಿಜವಾಗಿ ಕಾಳಜಿ ಇದ್ರೆ, ಅಧಿಕಾರದಲ್ಲಿ ಇದ್ದಾಗಲೇ ಮಾಡ್ತಿದ್ರು ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆರು ವರ್ಷ ಇತ್ತು. ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿದ್ರು. ನಯಾ ಪೈಸಾ ನೀರಾವರಿಗೆ ಮೀಸಲಿಡಲಿಲ್ಲ. ಅದರ ಬಗ್ಗೆ ಯೋಚನೆ ಕೂಡ ಮಾಡಲಿಲ್ಲ. ಏನೂ ಮಾಡದಿದ್ದಕ್ಕೆ ಇದೀಗ ಒಂದು ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.