ಹೈಕೋರ್ಟ್ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೆಂಡಾಮಂಡಲಗೊಂಡಿದೆ. ರಾಜ್ಯ ಸರ್ಕಾರ ಅಸಮರ್ಥವಾಗಿದೆಯೇ ಎಂದೂ ಪ್ರಶ್ನೆ ಮಾಡಿದೆ. ಸರ್ಕಾರ ಮತ್ತು ಕೆಪಿಸಿಸಿಗೆ ಕೋರ್ಟ್ ಒಂದು ದಿನದ ಗಡುವು ನೀಡಿ, ತಕ್ಷಣ ಉತ್ತರಿಸುವಂತೆ ಸೂಚಿಸಿದೆ.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್‍ಗೆ ಪಿಐಎಲ್ ಸಲ್ಲಿಕೆಯಾಗಿದೆ. ತುರ್ತು ವಿಚಾರಣೆಗೆ ವಕೀಲ ಶ್ರೀಧರ್ ಪ್ರಭು ಎಂಬುವವರು ಇಂದು ಮನವಿ ಮಾಡಿದ್ದರು. ಕೆಪಿಸಿಸಿ ಪಾದಯಾತ್ರೆಯಿಂದ ಕೊವಿಡ್ ಹಬ್ಬಲಿದೆ. ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ. ಮಾಸ್ಕ್ ಇಲ್ಲದೇ ನಾಯಕರು ಮಕ್ಕಳನ್ನು ಭೇಟಿ ಮಾಡಿದ್ದಾರೆ. ಪಾದಯಾತ್ರೆ ಸೂಪರ್ ಸ್ಪ್ರೆಡರ್ ಆಗುವ ಭೀತಿ ಇದೆ. ಹೀಗಾಗಿ ಪಿಐಎಲ್ ತುರ್ತು ವಿಚಾರಣೆ ನಡೆಸಬೇಕು ಎಂದು ಅವರು ಮನವಿ ಮಾಡಿದ್ದರು. ಪಿಐಎಲ್ ವಿಚಾರಣೆಯನ್ನು ತುರ್ತಾಗಿಯೇ ಕೈಗೆತ್ತಿಕೊಂಡ ಹೈಕೋರ್ಟ್ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೆಂಡಾಮಂಡಲಗೊಂಡಿದೆ. ರಾಜ್ಯ ಸರ್ಕಾರ ಅಸಮರ್ಥವಾಗಿದೆಯೇ ಎಂದೂ ಪ್ರಶ್ನೆ ಮಾಡಿದೆ. ಸರ್ಕಾರ ಮತ್ತು ಕೆಪಿಸಿಸಿಗೆ ಕೋರ್ಟ್ ಒಂದು ದಿನದ ಗಡುವು ನೀಡಿ, ತಕ್ಷಣ ಉತ್ತರಿಸುವಂತೆ ಸೂಚಿಸಿದೆ. ಕರ್ನಾಟಕ ಈಗಾಗಲೇ ಕೋವಿಡ್‍ನಿಂದ ತತ್ತರಿಸುತ್ತಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ತೀವ್ರ ಅಸಮಾಧಾನ ಹೊರ ಹಾಕಿದೆ. ಸರ್ಕಾರದ ಮಾರ್ಗಸೂಚಿ ಪಾಲಿಸಲು ಕೆಪಿಸಿಸಿ ಏನು ಕ್ರಮ ಕೈಗೊಂಡಿದೆ ಎಂದೂ ಕಾಂಗ್ರೆಸ್ ಪಕ್ಷವನ್ನು ಪೀಠ ಪ್ರಶ್ನೆ ಮಾಡಿದೆ.