ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯ 15ರಿಂದ 18 ವರ್ಷದ 12 ವಿದ್ಯಾರ್ಥಿನಿಯರಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ.

ಹೌದು ಕಿತ್ತೂರಿನಲ್ಲಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಯ ಹಲವು ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ರ್ಯಾಪಿಡ್ ಟೆಸ್ಟ ಮಾಡಿಸಲಾಗಿತ್ತು. ಇವರ ರಿಪೋರ್ಟ ಇಂದು ಬಂದಿದ್ದ 102 ವಿದ್ಯಾರ್ಥಿನಿಯರ ಪೈಕಿ 12 ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಸೀಲ್‍ಡೌನ್‍ಗೆ ತಾಲೂಕಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸೋಂಕಿತ ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದ್ದು. ಚಿಕಿತ್ಸೆ ಪಡೆಯುತ್ತಿದ್ದಾರೆ.