COVID-19

ಕಿತ್ತೂರು ಸೈನಿಕ ಶಾಲೆಯಲ್ಲಿ ಮತ್ತೆ ಕೊರೊನಾ ಸ್ಫೋಟ: 68 ವಿದ್ಯಾರ್ಥಿನಿಯರು, 10 ಸಿಬ್ಬಂದಿಗಳಿಗೆ ಸೋಂಕು ದೃಢ

Share

ಮೊನ್ನೆಯಷ್ಟೇ ಕಿತ್ತೂರು ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯ 12 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಮತ್ತೆ 68 ವಿದ್ಯಾರ್ಥಿನಿಯರಿಗೆ ಸೋಂಕು ಪತ್ತೆಯಾಗಿರುವುದು ಇಲ್ಲಿನ ವಿದ್ಯಾರ್ಥಿನಿಯರ ಪಾಲಕರಿಗೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಕಳೆದ ಎರಡು ದಿನಗಳ ಹಿಂದೆ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ರ್ಯಾಪಿಡ್ ಟೆಸ್ಟ್ ಜತೆಗೆ ಆರ್‍ಟಿಪಿಸಿಆರ್ ಟೆಸ್ಟ್ ಮಾಡಿದ್ದರು. ಎರಡು ದಿನಗಳ ಹಿಂದೆ ರ್ಯಾಪಿಡ್ ಟೆಸ್ಟ್‍ನಲ್ಲಿ 12 ವಿದ್ಯಾರ್ಥಿನಿಯರಿಗೆ ಕೊವಿಡ್ ಸೋಂಕು ದೃಢ ಪಟ್ಟಿತ್ತು. ಇಂದು ಮತ್ತೆ 68 ವಿದ್ಯಾರ್ಥಿನಿಯರಿಗೆ ಪಾಸಿಟಿವ್ ಧೃಡವಾಗಿದೆ. ಇದರಿಂದ ಒಟ್ಟು ಎರಡು 80 ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿದೆ. ಇನ್ನು 10 ಜನ ಶಾಲಾ ಸಿಬ್ಬಂದಿಗೂ ಸೋಂಕು ಹರಡಿದೆ. ಇದರಿಂದ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಹಾಗೂ ಸಿಬ್ಬಂದಿ ಸೇರಿ 90 ಜನರಿಗೆ ಹೆಮ್ಮಾರಿ ವೈರಸ್ ವಕ್ಕರಿಸಿಕೊಂಡಿದೆ.

ಒಟ್ಟು 600ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ಮಹಾಮಾರಿ ಕೊರೊನಾ ಉಲ್ಭಣ ಆಗಿದ್ದರೂ ಕೂಡ ಜಿಲ್ಲಾಡಳಿತ ಮಾತ್ರ ಎಚ್ಚೆತ್ತುಕೊಂಡಿಲ್ಲ. ಅಲ್ಲದೇ ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಹೊರ ರಾಜ್ಯಗಳ ವಿದ್ಯಾರ್ಥಿನಿಯರು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಿದ್ದರೂ ಶಾಲೆ ಹಾಗೂ ವಸತಿ ನಿಲಯವನ್ನ ಸೀಲ್‍ಡೌನ್ ಮಾಡದೇ ಕಣ್ಮುಚ್ಚಿ ಕುಳಿತಿರುವ ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Tags:

error: Content is protected !!