COVID-19

ಕಿಮ್ಸ್ ಅಧೀಕ್ಷಕರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವರು ಪ್ರಹ್ಲಾದ ಜೋಶಿ

Share

ಕೋವಿಡ್-19 ಮೂರನೇ ಅಲೆಯ ನಿಯಂತ್ರಣ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದ ಸಭೆಯಲ್ಲಿ ಕಿಮ್ಸ್ ನ ವೇದಾಂತ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮಹಿಳೆ ಸಾವಿನ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದು, ಕಿಮ್ಸ್ ಅಧೀಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

ಕೋವಿಡ್-19 ಮೂರನೇ ಅಲೆಯ ನಿಯಂತ್ರಣ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದ ಸಭೆಯಲ್ಲಿ ಕಿಮ್ಸ್ ನ ವೇದಾಂತ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮಹಿಳೆ ಸಾವಿನ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದು, ಕಿಮ್ಸ್ ಅಧೀಕ್ಷಕರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ಅವರು ಸಭೆ ಆರಂಭವಾಗುತ್ತಿದ್ದಂತೆಯೇ ಕಿಮ್ಸ್ ನಿರ್ಲಕ್ಷ್ಯದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿಯೇ ಕಿಮ್ಸ್ ಅಧೀಕ್ಷಕ ಡಾ.ಅರುಣಕುಮಾರ್ ಅವರಿಂದ ಮಾಹಿತಿ ಪಡೆದ ಜೋಶಿ, ನಿಮ್ಮಿಂದ ಈ ರೀತಿ ನಿರ್ಲಕ್ಷ್ಯ ಆಗುತ್ತಿದ್ದರೇ ಜನ ನಂಬಿಕೆ ಕಳೆದುಕೊಳ್ಳುತ್ತಾರೆ ಎಂದು ಖಾರವಾಗಿ ಮಾತನಾಡಿದರು. ಇನ್ನೂ ಪ್ರಕರಣದ ಬಗ್ಗೆ ಐಸಿಯು ಇನ್ ಚಾರ್ಜ್ ಗೆ ಶೋಕಾಸ್ ನೋಟಿಸ್ ನೀಡಿದ್ದಾಗಿ ಕಿಮ್ಸ್ ಅಧೀಕ್ಷಕ ಅರುಣಕುಮಾರ್ ಹೇಳಿದ್ದಾರೆ. ಇನೊಮ್ಮೆ ಪ್ರಕರಣ ಮರುಕಳಿಸದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಖಡಕ್ ಸೂಚನೆ ನೀಡಿದ್ದಾರೆ.

; ಇದೇ ವೇಳೆ ಜಿಲ್ಲಾಡಳಿತ ಕೋವಿಡ್ ನಿಯಂತ್ರಣದ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದರು. ಬೇಡ್, ವೆಂಟಿಲೇಶನ್, ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದರು.

Tags:

error: Content is protected !!