15 ರಿಂದ 18 ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣದಲ್ಲಿ ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ.

ಬೆಳಗಾವಿ ಜಿಲ್ಲೆಯಲ್ಲಿ 2.47 ಲಕ್ಷ ಮಕ್ಕಳಿಗೆ ಲಸಿಕೆ ಗುರಿ ಇಟ್ಟುಕೊಳ್ಳಲಾಗಿತ್ತು. ಮೊದಲ ದಿನ ಬೆಳಗಾವಿ ಜಿಲ್ಲೆಯ 298 ಕೇಂದ್ರದಲ್ಲಿ 60,254 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಎರಡನೇ ಸ್ಥಾನದಲ್ಲಿ ಬಿಬಿಎಂಪಿ, ಮೂರನೇ ಸ್ಥಾನದಲ್ಲಿ ಬಳ್ಳಾರಿ ಜಿಲ್ಲೆ ಗುರುತಿಸಿಕೊಂಡಿದೆ.