ನಿಪ್ಪಾಣಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ ನೀಡುವ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ *ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಚಾಲನೆ ನೀಡಿದರು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಅವರು ಎರಡನೇ ಡೋಸ್ ಪಡೆದ ಒಂಬತ್ತು ತಿಂಗಳ (39 ವಾರ) ಬಳಿಕ ಮುನ್ನೆಚ್ಚರಿಕೆ ಡೋಸ್ ಪಡೆಯಲು ಅರ್ಹರಾಗಿರುತ್ತಾರೆ. ಅರ್ಹ ವ್ಯಕ್ತಿಗಳಿಗೆ ಕೋವಿನ್ ಫ್ಲ್ಯಾಟ್ಫಾರ್ಮ್ ರಿಮೈಂಡರ್ ಮೆಸೇಜ್ ಕಳುಹಿಸಲಿದೆ. ಹೀಗಾಗಿ ಅರ್ಹರು ಬೂಸ್ಟರ್ ಡೋಸ್ ಅನ್ನು ಪಡೆದುಕೊಳ್ಳಿ. ಇತ್ತೀಚೆಗೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಕೂಡ ಸರ್ಕಾರದ ಮುನ್ನೆಚ್ಚರಿಕೆ ನಿಯಮಗಳನ್ನು ಪಾಲಿಸಿ, ಸುರಕ್ಷಿತವಾಗಿರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೈದ್ಯರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.