Banglore

ಕೋವಿಡ್ ಲಸಿಕೆ ಸರಬರಾಜಿನಲ್ಲಿ ಭಾರತ ವಿಶ್ವದ ದೊಡ್ಡಣ್ಣನ ಕೆಲಸ ಮಾಡ್ತಿದೆ: ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ

Share

ವಿಶ್ವದ ಬಡ ರಾಷ್ಟ್ರಗಳಿಗೆ ಲಸಿಕೆ ಸರಬರಾಜು ಮಾಡುತ್ತಿದ್ದೇವೆ. ವಿಶ್ವದ ದೊಡ್ಡಣ್ಣ ಮಾಡುವಂತಹ ಕೆಲಸ ಭಾರತ ಮಾಡುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಭಾರತದಲ್ಲಿ ಲಸಿಕಾ ಅಭಿಯಾನಕ್ಕೆ ಇಂದಿಗೆ ಒಂದು ವರ್ಷ ಆಗಿದೆ. ಲಸಿಕಾ ಅಭಿಯಾನದಲ್ಲಿ ಭಾರತ ದೊಡ್ಡ ಸಾಧನೆ ಮಾಡಿದೆ. ಹೀಗಾಗಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶ್ವದ ಬಡ ರಾಷ್ಟ್ರಗಳಿಗೆ ಲಸಿಕೆ ಸರಬರಾಜು ಮಾಡುತ್ತಿದ್ದೇವೆ. ವಿಶ್ವದ ದೊಡ್ಡಣ್ಣ ಮಾಡುವಂತಹ ಕೆಲಸ ಭಾರತ ಮಾಡುತ್ತಿದೆ. ವಿಶ್ವದ 36 ದೇಶಗಳಲ್ಲಿ ಶೇ.10ರಷ್ಟೂ ಲಸಿಕೆ ನೀಡಿಲ್ಲ. ಆದರೆ ಕರ್ನಾಟಕ ಶೇ.99ರಷ್ಟು ಮೊದಲ ಡೋಸ್ ನೀಡಿದೆ. ಶೇ.80ರಷ್ಟು ಜನರು ಎರಡನೇ ಡೋಸ್ ಪಡೆದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಕೊರೊನಾ ನಿಯಂತ್ರಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ನಿನ್ನೆ 10 ಸಾವಿರ ವೈದ್ಯರ ಜತೆ ಸಂವಾದ ಮಾಡಿದ್ದೇನೆ. ರಾಜ್ಯದಲ್ಲಿ ಎಷ್ಟೇ ಕೊವಿಡ್ ಕೇಸ್ ಪತ್ತೆಯಾದರೂ ಮನೆಯಲ್ಲೇ ಚಿಕಿತ್ಸೆ ನೀಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ನೀಡುವುದಕ್ಕೆ ಸಿದ್ಧತೆ ನಡೆಸಲಾಗಿದೆ. 3ನೇ ಅಲೆ ನಿಯಂತ್ರಣಕ್ಕೆ ವಿಶೇಷ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಹೋಟೆಲ್‍ಗಳ ಮಾಲೀಕರ ಜೊತೆಯೂ ಚರ್ಚೆ ಮಾಡಿದ್ದೇವೆ ಎಂದರು.

 

Tags:

error: Content is protected !!