COVID-19

ಕೋವಿಡ್ ಹೆಚ್ಚಲು ಪಾದಯಾತ್ರೆ ನಡೆಸಿದವ್ರೂ ಕೂಡ ಕಾರಣ: ಡಾ.ಕೆ.ಸುಧಾಕರ್ ಆರೋಪ

Share

ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ. ಯಾವುದೇ ಲಾಠಿ ಚಾರ್ಜ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ. ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆ ನಡೆಸಿದವರು ಕೂಡ ಕಾರಣರು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಪಿಸಿದ್ದಾರೆ.

ವಿಕಾಸಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಜನರ ಆರೋಗ್ಯ ಕಾಪಾಡಲು ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಿರುವುದಕ್ಕೆ ಅಭಿನಂದನೆ. ಅನೇಕ ಅಮಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಎಷ್ಟು ಮಂದಿಗೆ ಸೋಂಕು ಬಂದಿದೆ ಎಂದು ಗೊತ್ತಿಲ್ಲ. ಸರ್ಕಾರ ಪ್ರತಿಭಟನೆಯನ್ನು ತಡೆಯಲಿಲ್ಲ. ಆದರೆ ಈ ಸಮಯದಲ್ಲಿ ಪ್ರತಿಭಟನೆ ಬೇಡ ಎಂದು ಕೋರಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಕೋವಿಡ್ ನಿರ್ವಹಣೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಅಧಿಕಾರಿಗಳ ಸ್ಫೂರ್ತಿ ಕಳೆಯುವ ಕೆಲಸ ಎಂದು ಕಿಡಿಕಾರಿದರು.

 

Tags:

error: Content is protected !!