ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಮಹತ್ವದ ಸಭೆ ನಡೆಸಿದರು.

ಬೆಂಗಳೂರಿನ ಆರ್‍ಟಿ ನಗರ ನಿವಾಸದಿಂದಲೇ ವಿಡಿಯೋ ಕಾನ್ಫರೆನ್ಸ ಮೂಲಕ ಸಭೆ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಅವರು ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಸತತ ಒಂದು ಗಂಟೆಯಿಂದ ಸಭೆ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಅಕ್ಕ ಪಕ್ಕದ ರಾಜ್ಯಗಳ ವರದಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.