Belagavi

ಕ್ಯಾಂಪ್ ಪೊಲೀಸರಿಂದ ಮಟಕಾ ರೇಡ್: 7 ಮಂದಿ ಅಂದರ್

Share

ಮಟಕಾ ಆಡುತ್ತಿದ್ದ 7 ಮಂದಿಗೆ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿಯ ಕ್ಯಾಂಪ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಡಿಸಿಪಿ ಡಾ.ವಿಕ್ರಮ್ ಆಮ್ಟೆ ಅವರ ಮಾರ್ಗದರ್ಶನದಲ್ಲಿ ಕ್ಯಾಂಪ್ ಠಾಣೆ ಸಿಪಿಐ ಪ್ರಭಾಕರ್ ಧರ್ಮಟ್ಟಿ ನೇತೃತ್ವದ ತಂಡವು ಖಚಿತ ಮಾಹಿತಿ ಮೇರೆಗೆ ನಗರದ ಕ್ರಾಂತಿ ನಗರದಲ್ಲಿ ದಾಳಿ ಮಾಡಿ ಮಟಕಾ ಆಡುತ್ತಿದ್ದ 7 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಿಂದ 26 ಸಾವಿರ ರೂಪಾಯಿ ನಗದು, 7 ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಸಂಬಂಧ ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!