ಗೋಕಾಕ ನಗರದ ರಮೇಶ ಜಾರಕಿಹೊಳಿ ಅವರು ಗೃಹ ಕಛೇರಿಯಲ್ಲಿ ಇಂದು ಕೋವಿಡ್ ಮುಂಜಾಗೃತಾ ಕ್ರಮ ಕೈಗೊಳ್ಳುವ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಗೋಕಾಕ ನಗರದ ಗೃಹ ಕಛೇರಿಯಲ್ಲಿ ರಮೇಶ ಜಾರಕಿಹೊಳಿ ಅವರು ಇಂದು ಕೋವಿಡ್ ಮುಂಜಾಗೃತಾ ಕ್ರಮ ಕೈಗೊಳ್ಳುವ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರಾದ ರಮೇಶ ಜಾರಕಿಹೊಳಿ ಅವರು ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗಾಗಿ ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಆಂಟೀನ, ಸಿಪಿಐ ಗೋಪಾಲ ರಾಠೋಡ, ಬಿಇಓ ಜಿ.ಬಿ.ಬಳಗಾರ ಸೇರಿದಂತೆ ತಾಲೂಕಾ ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.