ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರ ಅನುದಾನದಲ್ಲಿ ನಿರ್ಮಿಸಲಾಗಿರುವ ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ಕಟ್ಟಡ ನಿರ್ಮಾಣ ಮಾಡಲಾಗಿದ್ದು ನಾಳೆ ರಂದು ಉದ್ಘಾಟನೆ ನೆರವೇರಲಿದೆ.

ಗೋಕಾಕ್‍ನ ಲೈಂಗಿಕ ವೃತ್ತಿನಿರತರ ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ತಮ್ಮ ಸ್ವಂತ ಕಟ್ಟಡವನ್ನು ಹೊಂದಲಿದೆ. ಮಾಜಿ ಸಂಸದರು ಹಾಗೂ ಹಾಲಿ ವಿಧಾನಪರಿಷತ್ ಸದಸ್ಯರು ಆದ ಸನ್ಮಾನ್ಯ ಬಿ.ಕೆ ಹರಿಪ್ರಸಾದ್ ಅವರ ಕಾಳಜಿಯಿಂದ ನೆಲೆಯಿಲ್ಲದೆ ಹಾದಿ ಬೀದಿಗಳಲ್ಲಿ ಜನರ ಕಣ್ಣು ತಪ್ಪಿಸಿ ಸಭೆ-ಸಮಾರಂಭ ಮಾಡುವ ಅಸಹಾಯಕ ಸ್ಥಿತಿಯಲ್ಲಿದ್ದ ಶಕ್ತಿ ಏಡ್ಸ್ ತಡೆಗಟ್ಟುವ ಮಹಿಳೆಯರ ಸಂಸ್ಥೆಗೆ ಸೂರು ಸಿದ್ದವಾಗಿದೆ. ಈ ಕಟ್ಟಡವನ್ನು ನಾಳೆ ಶುಕ್ರವಾರ ಜನವರಿ 7 ರಂದು ಶಾಸಕ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಲಿದ್ದಾರೆ.