ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ ಕನ್ನಡ ಹಿರಿಯ ಕವಿ, ಚಂಪಾ ಎಂದೇ ಖ್ಯಾತಿ ಪಡೆದಿದ್ದ ಡಾ.ಚಂದ್ರಶೇಖರ್ ಪಾಟೀಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಎಂ ಬೊಮ್ಮಾಯಿ ಪಡೆದುಕೊಂಡಿದ್ದಾರೆ.

ಬಂಡಾಯ ಕವಿ ಎಂದೇ ನಾಡಿನಲ್ಲಿ ಗುರುತಿಸಿಕೊಂಡಿದ್ದ ಡಾ.ಚಂದ್ರಶೇಖರ್ ಪಾಟೀಲ್ ಅವರು ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಇಂಗ್ಲೀಷ ಪ್ರೊಫೆಸರ್ ಆಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ಇವರ ನಿಧನರಾದ ವಿಷಯದಿಂದ ತುಂಬಾ ದುಃಖಿತನಾಗಿದ್ದೇನೆ ಎಂದು ಸಿಎಂ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.