ಟಿಪ್ಪರ್ ಮತ್ತು ಬೈಕ್ ಮಧ್ಯ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಬೆಳಗಾವಿಯ ಬಾಕ್ಸೈಟ್ ರೋಡ್‍ನಲ್ಲಿ ನಡೆದಿದೆ.

ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ಟಿಪ್ಪರ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಂಬೇವಾಡಿಯ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿಖಿಲ್ ಬಸವಂತ್ ಕಾಟ್ಕರ್(24) ಮೃತ ದುರ್ದೈವಿ. ಟಿಪ್ಪರ್ ಸಂಖ್ಯೆ ಕೆಎ 22ಬಿ 1389ರ ಚಾಲಕ ಬೈಕ್‍ಗೆ ಡಿಕ್ಕಿ ಹೊಡೆದು, ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.