ರಾಮನಗರದಲ್ಲಿ ಸಿಎಂ ಕಾರ್ಯಕ್ರಮದಲ್ಲಿ ನಡೆದ ಘಟನೆಯನ್ನ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಡಿಕೆಶಿ ಸುರೇಶ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕೋಡಿಯ ಬಸವೇಶ್ವರ ಸರ್ಕಲ್ ನಲ್ಲಿ ಚಿಕ್ಕೋಡಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಈ ವೇಳೆ ಕಾಂಗ್ರೆಸ್ ಪಕ್ಷದ ಡಿಕೆಶಿ ಶಿವಕುಮಾರ್, ಡಿಕೆ ಸುರೇಶ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವ್ಯಕ್ತಪಡಿಸಿದರು. ಪ್ರತಿಭಟನೆಗೆ ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ್ ನೆರ್ಲಿ ಸಾಥ್ ನೀಡಿದರು.