ಹಿರಿಯ ಕವಿ ನಾಡೋಜ ಚನ್ನವೀರ ಕಣವಿ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ಚನ್ನವೀರ ಕಣವಿ ಅವರು ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಹೋಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿದಾಗ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಚನ್ನವೀರ ಕಣವಿ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.