ಕಾರ್ನಾಟಕ ಸರಕಾರದ ಆದೇಶದಂತೆ ಬೆಳಗಾವಿ ಜಿಲ್ಲೆಯಲ್ಲಿ ನಾಳೆ ಸೋಮವಾರದಂದು 15ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ವ್ಯಾಕ್ಸಿನ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಮಾನ್ಯ ಜಿಲ್ಲಾ ಉಸುವಾರಿ ಸಚಿವ ಗೋವಿಂದ್ ಕಾರಜೋಳ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ಎಂಜಿ ಹಿರೇಮಠ ಹೇಳಿದ್ದಾರೆ.

ಬೆಳಗಾವಿಯ ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ನಾಳೆಯಿಂದ ಜಿಲ್ಲೆಯಲ್ಲಿ 15ರಿಂದ18 ವರ್ಷದೊಳಗಿಮ ಮಕ್ಕಳಿಗೆ ಕೊವಿಡ್ ವ್ಯಾಕ್ಸಿನ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಾದ್ಯಂತ 178 ಕೇಂದ್ರಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಹಾಗೂ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನೇಶನ್ ನೀಡಲಾಗುತ್ತಿದೆ. ಜಿಲ್ಲೆಯಾದ್ಯಂತ ಇರುವ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ್‍ರವರು ಬೆಳಗಾವಿ ನಗರದ ಬಾಳೇಕುಂದ್ರಿ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹಾಗಾಗಿ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗಿಯಾಗುವ ಮೂಲಕ ಎಶೆಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಪಾಲಕರು ಮಕ್ಕಳಿಗೆ ಈ ಕುರಿತಂತೆ ಧೈರ್ಯ ಹೇಳಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಎಲ್ಲರಿಗೂ ಒಳ್ಳೆಯದಾಗುತ್ತೆ. ಕೊವಿಡ್ ನಿಯಂತ್ರಣಕ್ಕೆ ಇದು ಒಳ್ಳೆಯ ಮಾರ್ಗ ಎಂದರು.