ರಾಷ್ಟ್ರೀಯ ಪರೀಕ್ಷೆ ಸಂಸ್ಥೆ ನಡೆಸಿದ ಯು.ಜಿ.ಸಿ ಎನ್.ಇ.ಟಿ ಕನ್ನಡದ ಐಚ್ಛಿಕ ಭಾμÉಯ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಭಾμÉಗಿಂತ ಶೇ 90 ರಷ್ಟು ಹಿಂದಿ ಭಾμÉ ಹೇರಿದ್ದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ತಹಶಿಲ್ದಾರ ಮೂಲಕ ಪ್ರಧಾನಮಂತ್ರಿಯವರಿಗೆ ಮನವಿ ಸಲ್ಲಿಸಿತು.

ಯುಜಿಸಿ ನೆಟ್ ಐಚ್ಛಿಕ ಕನ್ನಡ ಭಾಷೆಯ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಶೇ 90 ರಷ್ಟು ಹಿಂದಿ ಭಾಷೆ ಹೇರಿಕೆಯನ್ನು ಪ್ರಶ್ನಿಸಿ ಹುಬ್ಬಳ್ಳಿ ನಗರದ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಕನ್ನಡಿಗರಿಂದ ಅವಕಾಶಗಳನ್ನು ಕಿತ್ತುಕೊಳ್ಳುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಮತ್ತೊಂದು ನಿದರ್ಶನವೆಂಬಂತೆ ಮೊನ್ನೆ ರಾಷ್ಟ್ರೀಯ ಪರೀಕ್ಷೆ ನಡೆಸಿದ ಪರೀಕ್ಷೆಯಲ್ಲಿ ಯು.ಜಿ.ಸಿ, ನೆಟ್ ಕನ್ನಡ ಐಚ್ಛಿಕ ಭಾμÉಯಲ್ಲಿಯೂ ಶೇ 90 ರಷ್ಟು ಹಿಂದಿ ಭಾμÉಯಲ್ಲಿ ಪ್ರಶ್ನೆಗಳನ್ನು ಕೊಟ್ಟಿರುವುದು ಕಂಡು ಬಂದಿದೆ. ಇದರಿಂದ ಪರೀಕ್ಷೆ ಬರೆದ ಅಭ್ಯರ್ಥಿಗಳಲ್ಲಿಯೂ ಗೊಂದಲ ಉಂಟಾಗಿ ಪರೀಕ್ಷೆ ಬಹಿಷ್ಕರಿಸಿದ್ದಾರೆ. ಇದು ಕನ್ನಡ ದ್ರೋಹ ಉದ್ದೇಶ ಪೂರ್ವಕವಾಗಿಯೇ ಇಂಥಹ ಕೃತ್ಯಗಳನ್ನು ಸಂಸ್ಥೆ ಮಾಡಿದೆ ಎಂದು ಆರೋಪಿಸಿ ತಹಶಿಲ್ದಾರ ಮೂಲಕ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆನಂದ ದಲಬಂಜನ, ಸಿದ್ದು ಹಿರೇಮಠ, ಬಸವರಾಜ ಶಿವಶಿಂಪರ, ಸತೀಶ್, ಮಂಜುನಾಥ ಕಮಥರ ಸೇರಿದಂತೆ ಉಪಸ್ಥಿತರಿದ್ದರು.