ಪಂಚಮಸಾಲಿ ೨ಎ ಮೀಸಲಾತಿ ಹೋರಾಟಕ್ಕೆ ಒಂದು ವರ್ಷ ತುಂಬಿದೆ. ಸಂಕ್ರಾAತಿಗೆ ಹೋರಾಟಕ್ಕೆ ಒಂದು ವರ್ಷ ತುಂಬಲಿದ್ದು, ಹೋರಾಟದ ವರ್ಷಾಚರಣೆಗೆ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಶ್ರೀಗಳು ರೆಡಿಯಾಗಿದ್ದಾರೆ. ಇದೆ ದಿನಾಂಕ ೧ ರಂದು ಹೋರಾಟದ ವರ್ಷಾಚರಣೆ ನಡೆಸಲಾಗ್ತಿದ್ದು, ಲಕ್ಷದ ವರೆಗು ಪಂಚಮಸಾಲಿ ಸಮುದಾಯದವರು ಪಾಲ್ಗೊಳ್ಳಲಿದ್ದಾರೆ ಎಂದು ಪಂಚಮಸಾಲಿ ಶ್ರೀಗಳು ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಸವಜಯ ಮೃತ್ಯುಂಜಯ ಶ್ರೀಗಳು ಈಗಾಗಲೇ ಹೋರಾಟದ ವರ್ಷಾಚರಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಸಿಎಂ ಬೊಮ್ಮಾಯಿಯವರು ಮೀಸಲಾತಿ ವಿಚಾರದಲ್ಲಿ ಶುಭ ಸುದ್ದಿ ಕೊಡಲಿದ್ದಾರೆ ಎಂದ್ರು.
ಇನ್ನು ಹೋರಾಟದ ವರ್ಷಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು ಕೋವಿಡ್ ಕಾರಣದಿಂದ ಕಾರ್ಯಕ್ರಮ ಬೇಡ ಎಂದು ಅಧಿಕಾರಿಗಳು ಹೇಳ್ತಿದ್ದಾರೆ. ಆದ್ರೆ ಈಗಾಗಲೇ ನಾವು ಕಾರ್ಯಕ್ರಮ ನಡೆಸುವ ಸಲುವಾಗಿಯೇ ಹಲವು ಸುತ್ತಿನ ಸಭೆಗಳನ್ನ ಮಾಡಿ ತೀರ್ಮಾನಕ್ಕೆ ಬಂದಿದ್ದೇವೆ. ಮುಂದಿನ ಬದಲಾವಣೆಗಳ ಬಗ್ಗೆ ಹೋರಾಟ ಸಮೀತಿಯ ಅಧ್ಯಕ್ಷರು ವಿಜಯಾನಂದ ಕಾಶಪ್ಪನವರ್ ಹಾಗೂ ಶಾಸಕ ಬಸನಗೌಡ ಯತ್ನಾಳ್ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಪಂಚಮಸಾಲಿ ಸಮುದಾಯದ ಪಾದಯಾತ್ರೆ ಹೋರಾಟದ ವರ್ಷಾಚರಣೆ ಏನಾಗುತ್ತದೆ ಎಂದು ಕಾದು ನೋಡಬೇಕಿದೆ.