ತೀವ್ರ ಕುತೂಹಲ ಮೂಡಿಸಿದ್ದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ರಾಜ್ಯಗಳ ವಿಧಾನ ಸಭಾ ಚುನಾವಣೆ ದಿನಾಂಕ ಇಂದು ಘೋಷಣೆ ಆಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಪಂಚ ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದಾರೆ.

ಗೋವಾ, ಪಂಜಾಬ್ ಮತ್ತು ಉತ್ತರಖಂಡದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.ಉತ್ತರ ಪ್ರದೇಶದಲ್ಲಿ 7ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10, 14, 20, 23, 27, ಮಾರ್ಚ್ 3, 7 ರಂದು ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ.
ಮಣಿಪುರದಲ್ಲಿ 2ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 27 ರಂದು ಮೊದಲ ಹಂತದ ಮತದಾನ ನಡೆದರೆ ಮಾರ್ಚ್ 3 ರಂದು ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ .
ಗೋವಾ, ಉತ್ತರಾಖಂಡ್, ಪಂಜಾಬ್ ನಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.ಈ ಎಲ್ಲ ರಾಜ್ಯಗಳ ಮತ ಎಣಿಕೆ ಮಾರ್ಚ್ 10 ರಂದು ಘೋಷಣೆಯಾಗಲಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ತಿಳಿಸಿದ್ದಾರೆ.