ಪ್ರಧಾನಮಂತ್ರಿಗಳಿಗೆ ಭದ್ರತೆ ಕೊಡಲು ವಿಫಲವಾದ ಪಂಜಾಬ್ ಸರ್ಕಾರವನ್ನು ವಜಾ ಮಾಡಬೇಕು. ಯಾವುದೇ ಪ್ರಧಾನಮಂತ್ರಿಗಳಿಗೆ ಗೌರವ ಕೊಡುವಂತಹದು ಎಲ್ಲ ಸರ್ಕಾರಗಳ ಮತ್ತು ಎಲ್ಲರ ಕರ್ತವ್ಯವಾಗಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ಮಾಡಬೇಕು, ತಪ್ಪಿಸ್ಥರಿಗೆ ಉಗ್ರವಾದ ಶಿಕ್ಷೆ ಆಗಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಪಂಜಾಬ್ ಗಡಿಯಲ್ಲಿ ಪಂಜಾಬ್ ಸರ್ಕಾರ ಪ್ರಧಾನಮಂತ್ರಿಗಳಿಗೆ ಭದ್ರತೆ ಕೊಡಲು ವಿಫಲವಾಗಿದೆ. ದೇಶದ ಪ್ರಧಾನಮಂತ್ರಿಗಳಿಗೆ ಮುಕ್ತವಾಡಿ ಓಡಾಡಲು ವ್ಯವಸ್ಥೆ ಮಾಡಿ ಕೊಡದೇ ಇರುವುದಕ್ಕೆ ದೇಶಾಧ್ಯಂತ ಖಂಡನೆ ವ್ಯಕ್ತವಾಗುತ್ತದೆ. ಇದು ಅತ್ಯಂತ ಖಂಡನಾರ್ಹ ವಿಚಾರವಾಗಿದೆ ಎಂದರು.