ಏನೆಲ್ಲಾ ನಿರ್ಬಂಧ ವಿಧಿಸಬೇಕು ಎಂಬುದು ಕಾನೂನಿನಲ್ಲಿದೆ. ಅದನ್ನು ಕಟ್ಟುನಿಟ್ಟಾಗಿ ಇಂದು ಅನುಷ್ಠಾನಕ್ಕೆ ತರುತ್ತೇವೆ. ಪಾದಯಾತ್ರೆಯಲ್ಲಿ ಒಂದು ಹೆಜ್ಜೆಯೂ ಮುಂದೆ ಹೋಗಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕೈ ನಾಯಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ ಪಾದಯಾತ್ರೆ ಬಗ್ಗೆ ಜವಾಬ್ದಾರಿಯುತ ಪಕ್ಷ ರಾಜಕೀಯ ಲಾಭಕ್ಕೆ ಹೇಗೆ ನಡೆದುಕೊಳ್ಳುತ್ತಿದೆ ಅಂತ ತೋರಿಸಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪಾದಯಾತ್ರೆ ಇಂದಾಗಿ ಜನ ಆತಂಕಗೊಂಡಿದ್ದಾರೆ. ಪಾದಯಾತ್ರೆಯಲ್ಲಿ ಇರುವವರಿಗೆ ಹೆಚ್ಚಾಗಿ ಕೊರೊನಾ ಪಾಸಿಟಿವ್ ಬರುತ್ತಿದೆ. ವೀರಪ್ಪ ಮೊಯ್ಲಿ, ಮಲ್ಲಾಜಮ್ಮ, ಶಿವಶಂಕರ್ ರೆಡ್ಡಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರೆಲ್ಲ ಗೊತ್ತಿರುವವರು. ಆದರೆ ಗೊತ್ತಿಲ್ಲದೇ ಇರುವ ಹಲವರಿಗೂ ಸಹ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇದು ಕೊರೊನಾ ಹರಡುವ ಪಾದಯಾತ್ರೆ ಎಂದು ಕಿಡಿಕಾರಿದರು.
ಸದ್ಯ ಕಾಂಗ್ರೆಸ್ ಸಭೆ ನಡೆಸುತ್ತಿದೆ. ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ. ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸದಿದ್ದರೆ ಕಾನೂನು ಪ್ರಕಾರ ನಿಲ್ಲಿಸುತ್ತೇವೆ. ಕಾಯಿದೆ ಪ್ರಕಾರ ಪಾದಯಾತ್ರೆ ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿವೆ. ಈಗಾಗಲೇ ಬುಧವಾರ ರಾತ್ರಿಯೇ ಪೆÇಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.