COVID-19

ಪಾದಯಾತ್ರೆಯಿಂದ ಹಿಂದೆ ಸರಿದ ಕಾಂಗ್ರೆಸ್: ಡಿಕೆಶಿ ಘೋಷಣೆ

Share

ಅಂತೂ ಇಂತೂ ಹೈಕೋರ್ಟ ತರಾಟೆಗೆ ತೆಗೆದುಕೊಂಡ ಬಳಿಕ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದು. ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಕೈಗೊಂಡಿದ್ದ ಪಾದಯಾತ್ರೆಯನ್ನು ಹಿಂಪಡೆದಿದ್ದಾರೆ. ಈ ಮೂಲಕ 11 ದಿನಗಳ ಪಾದಯಾತ್ರೆ 5ನೇ ದಿನಕ್ಕೆ ಅಂತ್ಯವಾಗಿದೆ.

ಹೌದು ಮೇಕೆದಾಟು ಪಾದಯಾತ್ರೆಯನ್ನು ಮುಂದೂಡಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧಾರ ಮಾಡಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಹೈಕಮಾಂಡ್ ಆದೇಶದಂತೆ ತಾತ್ಕಾಲಿಕವಾಗಿ ಪಾದಯಾತ್ರೆ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯಿತು. ಕೊವಿಡ್ ಕಡಿಮೆ ಆದ ಬಳಿಕ ಪಾದಯಾತ್ರೆ ಮುಂದುವರಿಸಲು ತೀರ್ಮಾನಿಸಲಾಗಿದೆ. ಪಾದಯಾತ್ರೆಯನ್ನು ನಿಲ್ಲಿಸಲು ಡಿಕೆ ಶಿವಕುಮಾರ್ ಅವರಿಗೆ ಮನಸ್ಸಿರಲಿಲ್ಲ. ಆದರೆ ಹೈಕಮಾಂಡ್ ನಿಲ್ಲಿಸುವಂತೆ ಹೇಳಿತ್ತು. ಇದೀಗ ಯಾತ್ರೆಯನ್ನು ನಿಲ್ಲಿಸದೇ ಮೊಟಕುಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮುಂದುವರೆಸುವ ಯೋಜನೆಯನ್ನು ಕಾಂಗ್ರೆಸ್ ಹೊಂದಿದೆ.

 

Tags:

error: Content is protected !!