ನಾವು ಯಾವುದೇ ಕಾರಣಕ್ಕೂ ಪಾದಯಾತ್ರೆಯಿಂದ ಹಿಂದೆ ಸರಿಯುವುದಿಲ್ಲ. ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು, ಸ್ಯಾನಿಟೈಜ್ ಮಾಡಬೇಕು. ಇದೆಲ್ಲವನ್ನು ನಾವು ಮಾಡಿ, ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂದರು. ಇನ್ನು ಜನರ ಪ್ರಾಣ ಮುಖ್ಯ ಎಂಬ ಸಚಿವ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ನಾವು ಪ್ರಾಣ ಉಳಿಸುವ ಕೆಲಸವನ್ನೂ ಮಾಡುತ್ತೇವೆ ಸಿದ್ದರಾಮಯ್ಯ ಆರ್.ಅಶೋಕ್‍ಗೆ ಟಾಂಗ್ ಕೊಟ್ಟರು.