ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ದಕ್ಷಿಣ ವಲಯ ಸಮ್ಮೇಳನದಲ್ಲಿ ಭಾಗಿಯಾಗಿದ್ದರು.

ಈ ವೇಳೆ ವರ್ಚುವಲ್ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗತಿ ಶಕ್ತಿ ಯೋಜನೆ ದೇಶದ ಅಭಿವೃದ್ಧಿಯ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಹೊದಾಣಿಕೆ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನಿರ್ಣಾಯಕವಾದ ನಿರ್ಧಾರವನ್ನು ತೆಗದುಕೊಂಡಿದ್ದಾರೆ.
ಈ ನಿರ್ಧಾರ ರಾಜ್ಯದ ಸಮಸ್ಯೆಗಳ ಪರಿಹಾರ ಹೊಂದಾಣಿಕೆ, ಹಾಗೂ ಸಂಪನ್ಮೂಲಗಳ ಸದ್ಬಳಕೆಗಾಗಿ ಸ್ಥಳಾಂತರ, ಹಾಗೂ ಅಭಿವೃದ್ಧಿಯ ನಡುವೆ ಇರುವ ಕಂದಕವನ್ನು ತುಂಬಿಕೊಳ್ಳುವ ಉತ್ತಮ ಅವಕಾಶವನ್ನು ಮಾಡಿಕೊಡುತ್ತದೆ. ಈ ನಿಟ್ಟನಲ್ಲಿ ಪ್ರಧಾನಿ ನರೇಂದ್ರ ಮೋದಿಜಿ ದಾರ್ಶನಿಕ ಉದ್ದೇಶವನ್ನಿಟ್ಟುಕೊಂಡು ಈ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಿಗಳಾಗಿ ಅವರ ಅನುಭವದ ಆಧಾರದ ಮೇಲೆ ಈಗ ನಿರ್ಧಾ ತೆಗೆದುಕೊಂಡಿದ್ದಾರೆ. ರಾಜ್ಯಗಳ ಹಾಗೂ ದೇಶದ ದೊಡ್ಡ ಪ್ರಾಜೆಕ್ಟ್‍ಗಳಲ್ಲಿ ಒಗ್ಗೂಡಿ ಕೆಲಸ ಮಾಡುವ ಸಮಯ ಬಂದೊದಗಿದೆ.
ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಭಾಗಿತ್ವ ಅತ್ಯವಶ್ಯಕ. ಬಹುತೇಕ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಎಲ್ಲ ರಾಜ್ಯಗಳು ಕೇಂದ್ರದೊಂದಿಗೆ ಹೊಂದಾಣಿಕೆಯಿಂದ ಸಹಕರಿಸಬೇಕಾದುದು ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಅಗತ್ಯ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತಾರ್ಹ ಎಂದರು.
: ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಹಾಗೂ ಎಂ ಎಸ್ ಎಂ ಈ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು.