ಕನ್ನಡದ ಹಿರಿಯ ಸಾಹಿತಿ, ಬಂಡಾಯಗಾರ, ಕನ್ನಡದ ಅಸ್ಮಿತೆ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಡಾ.ಚಂದ್ರಶೇಖರ ಪಾಟೀಲ್ ( ಚಂಪಾ)(83) ಅವರು ಬೆಳಿಗ್ಗೆ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳಗಿನಜಾವ 6 ಗಂಟೆಗೆ ನಿಧನರಾದರು. ಅವರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಬೆಂಗಳಊರಿನಲ್ಲಿ ಸೋಮವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.