Banglore

ಬೂಸ್ಟರ್ ಡೋಸ್ ಪಡೆದು ಸಂಕ್ರಾಂತಿ ಶುಭಾಶಯ ಕೋರಿದ ರಾಜ್ಯಪಾಲರು

Share

ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಪಡೆದುಕೊಂಡರು.

ಹೌದು ರಾಜ್ಯಪಾಲರು ಬೂಸ್ಟರ್ ಡೋಸ್ ಪಡೆಯುವ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿ ಹಲವರು ಸಾಥ್ ನೀಡಿದರು. ನಂತರ ಮಾತನಾಡಿದ ರಾಜ್ಯಪಾಲರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು. ಕೊರೊನಾ ಮಹಾಮಾರಿಯಿಂದ ಮುಕ್ತಿಯಾಗಲು ಲಸಿಕೆ ಅವಶ್ಯಕತೆ ಇದೆ. ಲಸಿಕೆ ಪಡೆಯೋದು ಅವಶ್ಯವಾಗಿದೆ. ರಾಜ್ಯದ ಜನ ಲಸಿಕೆ ಪಡೆಯಬೇಕು. ಕೊರೊನಾದಿಂದ ಮುಕ್ತವಾಗಲು ಲಸಿಕೆ ಮುಖ್ಯ ಎಂದು ಸಲಹೆ ತಿಳಿಸಿದರು.

ದೆಹಲಿಯಲ್ಲಿ ಕೋವಿಡ್ ಲಸಿಕೆಯ ಎರಡು ಡೋಸ್‍ಗಳನ್ನು ನಾನು ಪಡೆದಿದ್ದೇನೆ. ಇಂದು ಬೂಸ್ಡರ್ ಡೋಸ್ ಪಡೆದಿದ್ದೇನೆ. ಪ್ರಮಾಣ ಪತ್ರವನ್ನು ನನಗೆ ನೀಡಿದ್ದಾರೆ. ಇಡೀ ದೇಶದಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ. ಲಸಿಕಾ ಅಭಿಯಾನದಲ್ಲಿ ಕರ್ನಾಟಕ ಮುಂದಿದೆ. ಈ ಕಾರ್ಯಕ್ಕೆ ಸಿಎಂ ಹಾಗೂ ಆರೋಗ್ಯ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರು ಲಸಿಕೆ ಪಡೆಯಬೇಕು. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು ಎಂದು ರಾಜ್ಯಪಾಲರು ತಿಳಿಸಿದರು.

 

Tags:

error: Content is protected !!