Banglore

ಬೆಂಗಳೂರು ಬಿಜೆಪಿ ಕಾರ್ಯಕರ್ತರಿಗೆ ಕೊರೊನಾ ಟಾಸ್ಕ್ ಕೊಟ್ಟ ಸಿಎಂ ಬೊಮ್ಮಾಯಿ

Share

ಸಾರ್ವಜನಿಕರ ಹಿತದೃಷ್ಟಿಯಿಂದ ಕೊರೊನಾ, ಒಮಿಕ್ರಾನ್ ಬಗ್ಗೆ ಮಾಹಿತಿ ಕೊಡುವುದು, ಹೋಮ್ ಕ್ವಾರಂಟೈನ್ ಮಾರ್ಗದರ್ಶನ, ಆಂಬುಲೆನ್ಸ ನಿರ್ವಹಣೆ, ವ್ಯಾಕ್ಸಿನ ಸೇರಿ ಎಲ್ಲ ರೀತಿಯ ಸಂದರ್ಭಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರದಲ್ಲಿ ಮುಂಜಾಗ್ರತಾ ಕ್ರಮ ಹಾಗೂ ಜನ ಜಾಗೃತಿ ಕೈಗೊಳ್ಳುವ ಕುರಿತು ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಬೆಂಗಳೂರು ದಕ್ಷಿಣ, ಉತ್ತರ ಹಾಗೂ ಕೇಂದ್ರ ಜಿಲ್ಲೆಗಳ ಸಚಿವರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಅವರು ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿಗಳು ಬೆಂಗಳೂರು ಮಹಾನಗರದ ಮೂರು ಜಿಲ್ಲೆಗಳ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯನ್ನು ಕರೆದಿದ್ದೇವು. ಕೋವಿಡ್ ಹೆಚ್ಚಾಗುತ್ತಿರುವ ಮತ್ತು ಒಮಿಕ್ರಾನ್ ಯಾವ ರೀತಿ ವರ್ತಿಸುತ್ತದೆ ಎಂದು ಮಾಹಿತಿ ಕೊಟ್ಟು, ಅದನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದ್ದೇವೆ. ಅದೇ ರೀತಿ ಕಳೆದ ಬಾರಿಯ ಅನುಭವ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತ ದೃಷ್ಟಿಯಿಂದ ತಾವು ಕೂಡ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದ್ದೇನೆ. ಎಲ್ಲರೂ ಸಮನ್ವಯತೆಯಿಂದ ಅದನ್ನು ಯಾವ ರೀತಿ ಎದುರಿಸಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದರು.

ಸಭೆಯಲ್ಲಿ ಮಾಜಿ ಸಿಎಂ ಸದಾನಂದಗೌಡ, ಸಚಿವರಾದ ವ್ಹಿ.ಸೋಮಣ್ಣ, ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಮುನಿರತ್ನ, ಸರ್ಕಾರದ ವಿಧಾನಸಭೆಯ ಮುಖ್ಯಸಚೇತಕ ಸತೀಶ ರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

Tags:

error: Content is protected !!