ಬೆಳಗಾವಿಯ ಹಿಂಡಾಲ್ಕೋ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ವ್ಯಕ್ತಿಯೊರ್ವನ ಮೃತ ದೇಹ ಛಿದ್ರ-ಛಿದ್ರವಾಗಿದೆ.

ಹೌದು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಗಳವಾರ ಸಾಯಂಕಾಲ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ವ್ಯಕ್ತಿಯ ತಲೆ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು. ದೇಹ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ವ್ಯಕ್ತಿಯ ಮಾಹಿತಿ ಇನ್ನು ಲಭ್ಯವಾಗಿಲ್ಲ. ಇನ್ನಷ್ಟೇ ಮಾಹಿತಿ ಸಿಗಬೇಕಿದೆ.