ಬುದ್ಧ, ಬಸವ, ಅಂಬೇಡ್ಕರ್ ಅವರ ಸಂದೇಶಗಳನ್ನು ಕಲೆಯ ಮೂಲಕ ಜನರಿಗೆ ಅರಿವು ಮೂಡಿಸುವ ಕೆಲಸದ ಜೊತೆಗೆ, ದೀನದಲಿತರ ಉದ್ಧಾರಕ್ಕೆ ನಿಸ್ವಾರ್ಥದಿಂದ ಸಮಾಜ ಸೇವೆಯಲ್ಲಿ ತೊಡಗಿದ ಬೆಳಗಾವಿಯ ಕಲಾವಿದ ಹಾಗೂ ಸಮಾಜ ಸೇವಕ ಆಕಾಶ ಹಲಗೇಕರ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ಡಿಸೆಂಬರ್ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ, ಸುವರ್ಣ ಚಾರಿಟಬಲ್ ಟ್ರಸ್ಟ್, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ವಿಭಿನ್ನ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದು ನಮ್ಮ ನಾಡಿನ ಕೀರ್ತಿಯನ್ನು ಇಮ್ಮಡಿಗೊಳಿಸಿದ ಸಾಧಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸುವುದಕ್ಕಾಗಿ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ರಾಜ್ಯ ಪ್ರಶಸ್ತಿಗೆ ಭಾಜನರಾದ ಹಲವಿ ಸಾಧಕರ ನಡುವೆ ಬೆಳಗಾವಿಯ ಆಕಾಶ ಹಲಗೇಕರ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರಕಲಾ ಅಕಾಡೆಮಿ ಅಧ್ಯಕ್ಷರಾದ ಡಾ.ಮರಿಯಪ್ಪ ಗುಳೆಜ್ಜಿ, ತಮ್ಮ ಚಿತ್ರಕಲೆಯ ಮೂಲಕ ದೀನದಲಿತರ ಉದ್ಧಾರಕ್ಕೆ ನಿಸ್ವಾರ್ಥದಿಂದ ಸಮಾಜ ಸೇವೆಯಲ್ಲಿ ತೊಡಗಿದ ಬೆಳಗಾವಿಯ ಕಲಾವಿದ ಹಾಗೂ ಸಮಾಜ ಸೇವಕ ಆಕಾಶ ಹಲಗೇಕರ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಇನ್ನು ಅವರ ಮುಂದಿನ ಯೋಜನೆಗಳು ಉತ್ತಮವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ.ಸುನಿಲ್ ಕುಮಾರ್ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ ಹೆಗ್ಡೆ, ಚಿತ್ರಕಲಾ ಅಕಾಡೆಮಿ ಅಧ್ಯಕ್ಷರಾದ ಡಾ.ಮರಿಯಪ್ಪ ಗುಳೆಜ್ಜಿ, ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ರಾಜ್ಯಾದ್ಯಕ್ಷರು ಶ್ರೀನಿವಾಸ ಬಾಬು ಎಮ್, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜೆ.ಜಗದೀಶ್ ಸೇರಿದಂತೆ ಇನ್ನಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜನಪ್ರೀಯ ಧಾರಾವಾಹಿ ಜೊತೆ ಜೊತೆಯಲ್ಲಿ ನಟ ಆರ್ಯವರ್ಧನ್ ಹಾಗೂ ನಟಿ ಅನು ಕೂಡ ಉಪಸ್ಥಿತರಿದ್ದರು.
ಬುದ್ಧ, ಬಸವ, ಅಂಬೇಡ್ಕರ್ ಅವರ ಸಂದೇಶಗಳನ್ನು ಕಲೆಯ ಮೂಲಕ ಜನರಿಗೆ ಅರಿವು ಮೂಡಿಸುವ ಕೆಲಸದ ಜೊತೆಗೆ, ದೀನದಲಿತರ ಉದ್ಧಾರಕ್ಕೆ ನಿಸ್ವಾರ್ಥದಿಂದ ಸಮಾಜ ಸೇವೆಯಲ್ಲಿ ತೊಡಗಿದ ಬೆಳಗಾವಿಯ ಕಲಾವಿದ ಹಾಗೂ ಸಮಾಜ ಸೇವಕ ಆಕಾಶ ಹಲಗೇಕರ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ಡಿಸೆಂಬರ್ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ, ಸುವರ್ಣ ಚಾರಿಟಬಲ್ ಟ್ರಸ್ಟ್, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ವಿಭಿನ್ನ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದು ನಮ್ಮ ನಾಡಿನ ಕೀರ್ತಿಯನ್ನು ಇಮ್ಮಡಿಗೊಳಿಸಿದ ಸಾಧಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸುವುದಕ್ಕಾಗಿ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ರಾಜ್ಯ ಪ್ರಶಸ್ತಿಗೆ ಭಾಜನರಾದ ಹಲವಿ ಸಾಧಕರ ನಡುವೆ ಬೆಳಗಾವಿಯ ಆಕಾಶ ಹಲಗೇಕರ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರಕಲಾ ಅಕಾಡೆಮಿ ಅಧ್ಯಕ್ಷರಾದ ಡಾ.ಮರಿಯಪ್ಪ ಗುಳೆಜ್ಜಿ, ತಮ್ಮ ಚಿತ್ರಕಲೆಯ ಮೂಲಕ ದೀನದಲಿತರ ಉದ್ಧಾರಕ್ಕೆ ನಿಸ್ವಾರ್ಥದಿಂದ ಸಮಾಜ ಸೇವೆಯಲ್ಲಿ ತೊಡಗಿದ ಬೆಳಗಾವಿಯ ಕಲಾವಿದ ಹಾಗೂ ಸಮಾಜ ಸೇವಕ ಆಕಾಶ ಹಲಗೇಕರ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಇನ್ನು ಅವರ ಮುಂದಿನ ಯೋಜನೆಗಳು ಉತ್ತಮವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ.ಸುನಿಲ್ ಕುಮಾರ್ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ ಹೆಗ್ಡೆ, ಚಿತ್ರಕಲಾ ಅಕಾಡೆಮಿ ಅಧ್ಯಕ್ಷರಾದ ಡಾ.ಮರಿಯಪ್ಪ ಗುಳೆಜ್ಜಿ, ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ರಾಜ್ಯಾದ್ಯಕ್ಷರು ಶ್ರೀನಿವಾಸ ಬಾಬು ಎಮ್, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜೆ.ಜಗದೀಶ್ ಸೇರಿದಂತೆ ಇನ್ನಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜನಪ್ರೀಯ ಧಾರಾವಾಹಿ ಜೊತೆ ಜೊತೆಯಲ್ಲಿ ನಟ ಆರ್ಯವರ್ಧನ್ ಹಾಗೂ ನಟಿ ಅನು ಕೂಡ ಉಪಸ್ಥಿತರಿದ್ದರು