ಬೆಳಗಾವಿಯ ಮುತ್ಯಾನಟ್ಟಿ ಗ್ರಾಮದಲ್ಲಿ ಯುವಕನೋರ್ವನ ಮೇಲೆ ತಲವಾರ್ ನಿಂದ ಹಲ್ಲೆ ನಡೆದಿದ್ದು ಗಾಯಗೊಂಡ ಯುವಕ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಬೆಳಗಾವಿ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 6 ಗಂಟೆಗೆ ಶ್ರೀಕಾಂತ ಕಟಾವಲಿ ಎಂಬವರ ಮೇಲೆ ತಲವಾರದಿಂದ ಹಲ್ಲೆ ಮಾಡಲಾಗಿದೆ. ಇತ್ತೀಚೆಗೆ ತಿಳಿದುಬಂದ ಮಾಹಿತಿ ಪ್ರಕಾರ ಸಚಿನ್ ದಡ್ಡಿ ಹಾಗೂ ರಂಜೀತ್ ದಡ್ಡಿ ಎಂಬವರು ಶ್ರೀಕಾಂತ ಮೇಲೆ ತಲವಾರರನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆಂದು ಗಾಯಗೊಂಡ ಶ್ರೀಕಾಂತ ಸಂಬಂಧಿಗಳು ತಿಳಿಸಿದ್ದಾರೆ. ಶ್ರೀಕಾಂತಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದವರ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಶ್ರೀಕಾಂತ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.