ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಆದ್ರೂ ಕೂಡ ಇಲ್ಲಿನ ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಯಾವುದೇ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇರುವುದು ಸಧ್ಯ ತೀವ್ರ ಟೀಕೆಗೆ ಗುರಿಯಾಗಿದೆ.

ಹೌದು ಬೆಳಗಾವಿಯ ಕೇಂದ್ರ ರೈಲ್ವೇ ನಿಲ್ದಾಣದ ಮುಖ್ಯ ದ್ವಾರದಲ್ಲಿ ಮಾತ್ರ ರೈಲ್ವೇ ಇಲಾಖೆ ಸಿಬ್ಬಂದಿ ಕಟ್ಟು ನಿಟ್ಟಾಗಿ ತಪಾಸಣೆ ಮಾಡುತ್ತಿದ್ದಾರೆ. ಆದರೆ ಕಳ್ಳ ಮಾರ್ಗ ಮೂಲಕ ಪ್ರಯಾಣಿಕರು ಬೇಕಾ ಬಿಟ್ಟಿಯಾಗಿ ಓಡಾಡುತ್ತಿರುವುದು ಬೆಳಕಿಗೆ ಬಂದಿದೆ. ಇಲ್ಲಿನ ಗೇಟ್ ಬಂದ್ ಮಾಡಬೇಕಿದ್ದ ಸಿಬ್ಬಂದಿ ಮಾತ್ರ ಕಣ್ಮುಚ್ಚು ಕುಳಿತಿರುವುದು ಸಧ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ, ಹೊರ ರಾಜ್ಯಗಳಿಂದ ಕೊರೊನಾ ಸೋಂಕಿತರು ಈ ರೀತಿ ಕಳ್ಳ ಮಾರ್ಗದಿಂದ ಬೆಳಗಾವಿಗೆ ಬಂದರೆ ಸೋಂಕು ಹೆಚ್ಚಾದ್ರೆ ಇದಕ್ಕೆ ಯಾರು ಹೊಣೆ ಎಂದು ಪ್ರಜ್ಞಾವಂತರು ಪ್ರಶ್ನಿಸುತ್ತಿದ್ದಾರೆ. ಹೀಗಾಗಿ ತಕ್ಷಣವೇ ರೈಲ್ವೇ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಿದೆ.