ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಫೋಟ ಸಂಭವಿಸಿದೆ. ಗುರುವಾರ ಜಿಲ್ಲೆಯಲ್ಲಿ ಒಂದೇ ದಿನಕ್ಕೆ 64 ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ.

ಬೆಳಗಾವಿ ತಾಲೂಕಿನಲ್ಲಿಯೇ ಒಂದೇ ದಿನಕ್ಕೆ 55ಜನರಲ್ಲಿ ಕೊರೊನಾ ಮಹಾಮಾರಿ ಕಾಣಿಸಿಕೊಂಡಿದೆ. ಗೋಕಾಕ್ ಹಾಗೂ ಖಾನಾಪುರಗಳಲ್ಲಿ ತಲಾ ಮೂವರಿಗೆ, ಚಿಕ್ಕೋಡಿ ಹಾಗೂ ಬೈಲಹೊಂಗಲದಲ್ಲಿ ತಲಾ ಒಬ್ಬರಿಗೆ, ಕೊರೊನಾ ಸೋಂಕು ಪತ್ತೆಯಾಗಿದೆ. ಯಾವುದೇ ಸಾವು ಪ್ರಕರಣಗಳು ದಾಖಲಾಗಿಲ್ಲ.
ಜಿಲ್ಲೆಯಲ್ಲಿ ಕೊರೊನಾ ಸ್ಫೋಟ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಮುಖ 9 ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಭಂಧಿಸಿ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಆದೇಶ ಹೊರಡಿಸಿದ್ದಾರೆ.