Belagavi

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ: ಇಂದು 70 ಪಾಸಿಟಿವ್ ಪತ್ತೆ

Share

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಫೋಟ ಸಂಭವಿಸಿದೆ. ಗುರುವಾರ ಜಿಲ್ಲೆಯಲ್ಲಿ ಒಂದೇ ದಿನಕ್ಕೆ 70 ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ.

ಬೆಳಗಾವಿಯಲ್ಲಿಯೇ ಒಂದೇ ದಿನಕ್ಕೆ 63ಜನರಲ್ಲಿ ಕೊರೊನಾ ಮಹಾಮಾರಿ ಕಾಣಿಸಿಕೊಂಡಿದೆ. ಚಿಕ್ಕೋಡಿ 2, ಅಥಣಿ 1, ಗೋಕಾಕ 3, ಹಾಗೂ ಇತರೆ 1, ಕೊರೊನಾ ಪ್ರಕರಣಗಳು ದಾಖಲಾಗಿವೆ.

ಇನ್ನು ನಿಪ್ಪಾಣಿಯ ಪ್ರಗತಿ ನಗರದ 36 ವರ್ಷದ ಮಹಿಳೆಗೆ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ತಾಲೂಕಾ ಆರೋಗ್ಯ ಇಲಾಖೆಯ ಮಾಹಿತಿ ನೀಡಿದೆ. ಇದರಿಂದ ನಿಪ್ಪಾಣಿ ಪಟ್ಟಣದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು. ತಾಲೂಕಾಡಳಿತ ಸೋಂಕು ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ.

Tags:

error: Content is protected !!