ಬೆಳಗಾವಿ ಜಿಲ್ಲೆಯ ಅಲ್ಪಸಂಖ್ಯಾತರ ಕಷ್ಟಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಅಲ್ಪಸಂಖ್ಯಾತರ ತುರ್ತು ಸಭೆ ಕರೆಯಬೇಕೆಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಮ್ರಾನ್ ತಪಕೀರ್ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೊವಿಡ್‍ನಿಂದಾಗಿ ಬೆಳಗಾವಿ ಜಿಲ್ಲೆಯ ಅಲ್ಪಸಂಖ್ಯಾತರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ನೀವನ ನಡೆಸಲೂ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಇನ್ನು ಸೊಸೈಟಿ ಹಾಗೂ ಬ್ಯಾಂಕುಗಳಿಂದ ಅವರು ಪಡೆದ ಸಾಲವನ್ನೂ ಕೂಡ ತುಂಬಲು ಆಗುತ್ತಿಲ್ಲ. ಹಾಗಾಗಿ ರೈತರ, ಕೂಲಿ ಕಾಮಿಕರ, ಆಟೋ ಚಾಲಕರ, ಹಾಗೂ ಡ್ರೈವರ್‍ಗಳ ಕಷ್ಟಗಳನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಸಭೆ ಕರೆಯಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಇಮ್ರಾನ್ ತಪಕೀರ್, ಉಪಾದ್ಯಕ್ಷರಾದ ತಬ್‍ಸುಮ್ ಮುಲ್ಲಾ, ಹಾಜಿ ಮುಸಾ ಗೋರಿಖಾನ್, ಖಾದಿರ್ ಶೇಖ್,ಅಕ್ಬರ್ ಸಡೇಕರ್ ಮೊದಲಾದವರು ಉಪಸ್ಥಿತರಿದ್ದರು.