COVID-19

ಬೆಳಗಾವಿ ಬಿಜೆಪಿ ಜನಸೇವಕ ಸಮಾವೇಶದಲ್ಲಿ ಭಾಗಿಯಾಗಿದ್ದ ಅಮಿತ್ ಷಾ ವಿರುದ್ಧವೂ ಕೇಸ್ ದಾಖಲಾಗಲಿ: ಭೀಮಪ್ಪ ಗಡಾದ್ ಆಗ್ರಹ

Share

ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ಮುಖಂಡರು ಮತ್ತು ಗಣ್ಯರ ಮೇಲೆ ಪ್ರಕರಣ ದಾಖಲಿಸಿದಂತೆ ಕಳೆದ ವರ್ಷ ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ನಡೆಸಿದ ಬಿಜೆಪಿ ಮುಖಂಡರ ಮೇಲೂ ಕ್ರಮ ಕೈಗೊಳ್ಳಲಿ. ಕೇಂದ್ರ ಸಚಿವ ಅಮಿತ್ ಷಾ ಸೇರಿದಂತೆ ಇನ್ನಿತರರ ಮೇಲೆ ಪ್ರಕರಣ ದಾಖಲಿಸಲಿ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಆಗ್ರಹಿಸಿದ್ದಾರೆ.

ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದು ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಭೀಮಪ್ಪ ಗಡಾದ್ ಆಡಳಿತ ಪಕ್ಷ, ವಿರೋಧ ಪಕ್ಷ, ಇತರೆ ಪಕ್ಷಗಳು ಹಾಗೂ ದೇಶದ ಪ್ರಧಾನಿಯಿಂದ ಹಿಡಿದು ಸಾಮಾನ್ಯ ಪ್ರಜೆವರೆಗೂ ಎಲ್ಲರಿಗೂ ಒಂದೇ ಕಾನೂನು. ಈ ನಿಟ್ಟಿನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯರಕ ಪೈಕಿ 31ಜನರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿದ್ದು ಸ್ವಾಗತಾರ್ಹ. ಅದೇ ರೀತಿ ಕಳೆದ ವರ್ಷ ಜನವರಿ 17 ರಂದು ಬೆಳಗಾವಿಯಲ್ಲಿ ಬಿಜೆಪಿಯವರು ಜನಸೇವಕ ಸಮಾವೇಶ ನಡೆಸಿದ್ದರು. ಇದರಲ್ಲಿ ಕೇಂದ್ರ ಸಚಿವ ಅಮಿತ್ ಷಾ ಸೇರಿದಂತೆ ಅಂದಿನ ಸಿಎಂ, ಡಿಸಿಎಂ, ಮಂತ್ರಿಗಳು ಎಲ್ಲರೂ ಭಾಗಿಯಾಗಿದ್ದರು. ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿದ್ದರು‌. ಆ ಸಂದರ್ಭದಲ್ಲಿಯೂ ಕೋವಿಡ್ ಹೆಚ್ಚಿತ್ತು ಪ್ರತಿ ನಿತ್ಯ ಸಾವಿರಾರು ಜನರು ಸಾವನ್ನಪ್ಪುತ್ತಿದ್ದರು. ಆ ವೇಳೆ ಈ ಸಮಾವೇಶ ರದ್ದು ಮಾಡುವಂತೆ ನಾವು ಮನವಿ ಸಲ್ಲಿಸಿದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ ಹೀಗಾಗಿ ಕೋವಿಡ್ ನಿಯಮ ಉಲ್ಲಂಘಿಸಿರುವ ಹಿನ್ನೆಲೆ ಜನಸೇವಕ ಸಮಾವೇಶದಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ರೆ ಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭೀಮಪ್ಪ ಗಡಾದ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ‌.

Tags:

error: Content is protected !!