COVID-19

ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ: ಮಹಾ 10 ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಸೋಂಕು ದೃಢ

Share

ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದ ಒಟ್ಟು 10 ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ತಗುಲಿರುವ ಆಘಾತಕಾರಿ ಸಂಗತಿಯನ್ನು ಅಲ್ಲಿನ ಡಿಸಿಎಂ ಅಜಿತ್ ಪವಾರ್ ತಿಳಿಸಿದ್ದಾರೆ.

ಶುಕ್ರವಾರ ಮಹಾರಾಷ್ಟ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಯಶೋಮತಿ ಠಾಕೂರ್ ತಮಗೆ ಕೊವಿಡ್-19 ಸೋಂಕು ತಗುಲಿದ್ದು, ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ. ಅμÉ್ಟೀ ಅಲ್ಲ, ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್-19 ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದರು. ಅದರೊಂದಿಗೆ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗಿತ್ತಿದೆ. ಹೀಗಾಗಿ ಪ್ರತಿಯೊಬ್ಬರೂ ಮುನ್ನೆಚ್ಚರಿಕಾ ಕ್ರಮಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದೀಗ 10ಕ್ಕೂ ಹೆಚ್ಚು ಸಚಿವರು, 20ಕ್ಕೂ ಅಧಿಕ ಶಾಸಕರಿಗೆ ಕೊರೊನಾ ತಗುಲಿದ್ದಾಗಿ ತಿಳಿಸಿದ್ದಾರೆ. ಇದೇ ಕಾರಣಕ್ಕೆ ನಾವು ವಿಧಾನಸಭೆ ಅಧಿವೇಶನವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

 

 

 

Tags:

error: Content is protected !!