Belagavi

ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ನೀಡಿ-ಎನ್.ಸಿ.ಪಿ

Share

ರಾಜ್ಯದಲ್ಲಿ ಮುಂಬರುವ ತಾಲೂಕ ಪಂಚಾಯತ, ಜಿಲ್ಲಾ ಪಂಚಾಯತ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ನೀಡಬೇಕೆಂದು ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಚುನಾವಣೆಗಳು ನಡೆಯುವ ಸಂದರ್ಭದಲ್ಲಿ ಮೊದಲೆಲ್ಲ ಬ್ಯಾಲೆಟ್ ಪೇಪರ್‍ಗಳನ್ನು ಬಳಕೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಕೆಲ ವರ್ಷಗಳಿಂದ ಬ್ಯಾಲೆಟ್ ಪೇಪರ್ ಬದಲಾಗಿ ಇವಿಎಂ ಮಶೀನ್‍ಗಳನ್ನು ಬಳಕೆ ಮಾಡಲಾಗುತ್ತಿದೆ. ಅವುಗಳಲ್ಲಿ ಸಾಕಷ್ಟು ಲೋಪದೋಷಗಳಿದ್ದು ಇದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಈಗ ಮುಂಬರುವ ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ, ಹಾಗೂ 2023ರ ವಿಧಾನಸಭಾ ಚುಣಾವಣೆಗಳನ್ನು ಕೂಡ ಬ್ಯಾಲೆಟ್ ಪೇಪರ್ ಬಳಕೆಯ ಮೂಲಕ ನಡೆಸಬೇಕೆಂದು ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ ವತಿಯಿಂದ ಬೆಳಗವಿಯ ಜಿಲ್ಲಾದಿಕಾರಿಗಳಿಗೆ ಮನವಿ ಮಾಡಿದರು.

ಈ ವೇಳೆ ತುಕಾರಾಮ್ ಕಾಂಬಳೆ ಮಾತನಾಡಿ, ಮೊದಲು ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಇವಿಎಂ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಆದರೆ ಇದರಲ್ಲಿ ಸಾಕಷ್ಟು ಲೋಪದೋಷಗಳಿದ್ದು ಕೂಡಲೇ ಮತ್ತೆ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಇದೇ ವೇಳೆ ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿಯ ಜಿಲ್ಲಾಧ್ಯಕ್ಷ ಅಮೂಲ್ ದೇಸಾಯಿ ಮಾತನಾಡಿ, ಬೆಳಗಾವಿ ನಗರದಲ್ಲಿ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಅವರನ್ನು ಬಿಡುಗಡೆ ಮಾಡಬೇಕು. ಇನ್ನು ಈ ಬಾರಿಯ ತಾಲೂಕು ಜಿಲ್ಲಾ ಪಂಚಾಯತ ಚುನಾವಣೆ ಸೇರಿದಂತೆ ವಿಧಾನಸಭಾ ಚುನಾವಣೆಗಳಲ್ಲಿಯೂ ಬ್ಯಾಲೆಟ್ ಪೇಪರ್ ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಬಹಳ ದಿನಗಳಿಂದ ಈ ಇವಿಎಂ ಯಂತ್ರಗಳನ್ನು ಕುರಿತಂತೆ ಜನರು ಸೇರಿ ಅಭ್ಯರ್ಥಿಗಳು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಈ ಮಶೀನ್ ಬದಲಾಗಿ ಮತ್ತೆ ಹಳೆಯ ಮಾದರಿಯ ಬ್ಯಶಲೆಟ್ ಪೇಪರ್ ವಿಧಾನವನ್ನೇ ಬಳೆಕೆಗೆ ತರಬೇಕೆಂದು ಒತ್ತಾಯ ಕೇಳಿಬರುತ್ತಿದೆ. ಆದರೆ ಈ ಕುರಿತಂತೆ ಆಯೋಗ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.

 

Tags:

error: Content is protected !!