ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಶ್ರೀ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ನೂರಾರು ಜನರು ಸೇರಿ ಜನಜಾತ್ರೆ ಮಾಡುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.

ಪಕ್ಕದ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಹಾಗೂ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದ್ರೆ, ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಗಡಿಭಾಗದಲ್ಲಿ ಮಾತ್ರ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಜನರಿಗೆ ಕೊರೊನಾ, ಒಮಿಕ್ರಾನ್ ಬಗ್ಗೆ ಜಾಗೃತಿ ಮೂಡಿಸಬೇಕಿದ್ದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಮುಗಳಖೋಡ ಜಾತ್ರೆಯಲ್ಲಿ ಭಾಗಿಯಾದ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ. ಜನರಿಗೆ ತಿಳುವಳಿಕೆ ಹೇಳಬೇಕಿದ್ದ ಪೆÇಲೀಸರು, ತಾಲೂಕಾಡಳಿತದ ಸಿಬ್ಬಂದಿಗಳು ಕಾಣಿಸುತ್ತಿಲ್ಲ. ಇದರಿಂದ ಜನರು ತಮಗೆ ಮನಬಂದಂತೆ ವರ್ತನೆ ಮಾಡುತ್ತಿದ್ದಾರೆ. ಇತ್ತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದರೂ ಯಲ್ಲಮ್ಮ ಜಾತ್ರೆಯನ್ನು ರಾಯಬಾಗ ತಹಶೀಲ್ದಾರರು ಏಕೆ ನಿಬರ್ಂಧ ಮಾಡಿಲ್ಲ ಎಂಬ ಪ್ರಶ್ನೆ ಉದ್ಭವವಾಗಿದೆ.