ರಾಜ್ಯದ ಜನತೆ ಬಿಜೆಪಿ ಸರ್ಕಾರ ಅನ್ಯಾಯ, ದ್ರೋಹ ಮಾಡುತ್ತಿದ್ದಾರೆ. ಮೇಕೆದಾಟು ಯೋಜನೆಗೆ ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಮೇಕೆದಾಟು ಯೋಜನೆಗೆ ಆಗ್ರಹಿಸಿ ನಾಳೆಯಿಂದ ಕಾಂಗ್ರೆಸ್ ಪಾದಯಾತ್ರೆ ಆರಂಭವಾಗುತ್ತಿದೆ. ಹೀಗಾಗಿ ಕನಕಪುರದ ಡಿ.ಕೆ.ಶಿವಕುಮಾರ್ ನಿವಾಸಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು. ಸಭೆ ಬಳಿಕ ಡಿಕೆಶಿ ಜೊತೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು ಸುಮಾರು 2 ತಿಂಗಳ ಹಿಂದೆ, ಮೇಕೆದಾಟು ಯೋಜನೆ ಅನುಷ್ಠಾಕ್ಕೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತೇವೆ ಎಂದು ಡಿಕೆಶಿ ಮತ್ತು ನಾನು ಹಿರಿಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದರು. ಇನ್ನು ಬಿಜೆಪಿಯವರು ಅಧಿಕಾರಕ್ಕೆ ಬಂದು ಎರಡೂವರೇ ವರ್ಷ ಆಗುತ್ತಾ ಬಂದಿದೆ. ಈ ಸರ್ಕಾರ ಅದನ್ನು ಪ್ರಾರಂಭ ಮಾಡಲು ಯಾವುದೇ ಪ್ರಯತ್ನ ಮಾಡಿಲ್ಲ. ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಕಾರಜೋಳ ಹೇಳುತ್ತಿದ್ದಾರೆ. ಕೇಂದ್ರದಲ್ಲಿ, ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಇದೆಯಲ್ಲಪ್ಪ ಎಂದು ಪ್ರಶ್ನಿಸಿದರು. ಒಂದು ವಾರ ಅಥವಾ 15 ದಿನದಲ್ಲಿ ಪರಿಸರ ಇಲಾಖೆಯಿಂದ ಕ್ಲಿಯರನ್ಸ ಪಡೆದುಕೊಳ್ಳಬಹುದು ಆದರೆ ಆ ಪ್ರಯತ್ನ ನೀವು ಮಾಡುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು 2013 ಸೆಪ್ಟೆಂಬರ್ ತಿಂಗಳಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದ ಎಂಬಿ ಪಾಟೀಲ್ ಅವರು ಮಿಟಿಂಗ್ ಮಾಡಿ ಮೇಕೆದಾಟು ಯೋಜನೆ ಆರಂಭಿಸುತ್ತಾರೆ. ನಾರಿಮನ್ ಅವರ ಸಲಹೆ ಪಡೆದು ಇದನ್ನು ನಾವು ಮಾಡಿದ್ದೇವೆ ಎಂದು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟರು.